ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು (Quiz Competition)
ವಿಷಯ : ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು (Quiz Competition) ಹಮ್ಮಿಕೊಳ್ಳುವ ಬಗ್ಗೆ.
ಉಲ್ಲೇಖ : ವಾರ್ಷಿಕ ಯೋಜನಾ ಮಂಡಳಿಯ ಅನುಮೋದನೆಯ ದಿನಾಂಕ: 27.04..2021
2021-22ನೇ ಸಾಲಿನ ವಾರ್ಷಿಕ ಯೋಜನಾ ಮಂಡಳಿಯಿಂದ “ರಾಷ್ಟ್ರೀಯ ಅವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ. ವಿದ್ಯಾರ್ಥಿಗಳಿಗೆ ಚಟುವಟಿಕೆಗಳನ್ನು ಮತ್ತು ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರೆ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮವು ಪೂರಕವಾಗಿದೆ.