KARNATKA OPS GAZET AND FORMAT FOR 13000 GOVT EMPLOYEE

KARNATKA OPS GAZET AND FORMAT FOR 13000 GOVT EMPLOYEE

ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.

KARNATKA OPS GAZET AND FORMAT FOR 13000 GOVT EMPLOYEE


ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ನಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.

1. ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.

2. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.

3. ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.

4. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ತರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.

5. ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.

6. ದಿನಾಂಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ನ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.


Share your love
Smart Guruji
Smart Guruji
Articles: 2261

Leave a Reply

Your email address will not be published. Required fields are marked *